ಉಡುಪಿ: ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 44093 ಪ್ರಕರಣ ಇತ್ಯರ್ಥ

ಉಡುಪಿ, ಸೆ.14: ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಶನಿವಾರ ನಡೆಯಿತು.


ಒಟ್ಟು 44,093 ಪ್ರಕರಣಗಳನ್ನು(ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ -32, ಚಿಕ್ಕು ಅಮಾನ್ಯ ಪ್ರಕರಣ-273, ಬ್ಯಾಂಕ್/ಹಣ ವಸೂಲಾತಿ ಪ್ರಕರಣ-11, ಎಂ.ವಿ.ಸಿ. ಪ್ರಕರಣ-86, ವೈವಾಹಿಕ ಪ್ರಕರಣ-3, ಸಿವಿಲ್ ಪ್ರಕರಣ-151, ಇತರ ಕ್ರಿಮಿನಲ್ ಪ್ರಕರಣ-2,459 ಹಾಗೂ ವ್ಯಾಜ್ಯ ಪೂರ್ವ ದಾವೆ-41,078) ರಾಜೀ ಮುಖಾಂತರ ಇತ್ಯರ್ಥಪಡಿಸಿ 27,46,21,144ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.


ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಯ ಸಹಕಾರದೊಂದಿಗೆ ಲೋಕ್ ಅದಾಲತ್ ಅನ್ನು ಯಶಸ್ವಿಗೊಳಿಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್.ಗಂಗಣ್ಣನವರ್ ತಿಳಿಸಿದ್ದಾ

Latest Indian news

Popular Stories