ಉಡುಪಿ: ಪ್ರತ್ಯೇಕ ಪ್ರಕರಣ – ಇಬ್ಬರು ನಾಪತ್ತೆ

ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಕಡಿಯಾಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವಿಜಯ ಶೆಟ್ಟಿ(57) ಎಂಬ ವ್ಯಕ್ತಿಯು ಸೆಪ್ಟಂಬರ್ 6 ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.


157 ಸೆ.ಮೀ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವ್ಯಕ್ತಿ ನಾಪತ್ತೆ


ಉಡುಪಿ: ಉಡುಪಿ ತಾಲೂಕು ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನ ಮನೆ (31) ಎಂಬ ವ್ಯಕ್ತಿಯು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

Latest Indian news

Popular Stories