Featured StoryUdupi

ಬ್ಲಾಕ್ ಕಾಂಗ್ರೆಸ್ ದಕ್ಷಿಣ ವಲಯ ಉಪಾಧ್ಯಕ್ಷ ಅಶೋಕ್ ರಾವ್, ಕಟಪಾಡಿ ಗ್ರಾ. ಪಂ ಸದಸ್ಯ ಈಶ್ವರ್ ಬಿಜೆಪಿ ಸೇರ್ಪಡೆ

ಬ್ಲಾಕ್ ಕಾಂಗ್ರೆಸ್ ದಕ್ಷಿಣ ವಲಯ ಉಪಾಧ್ಯಕ್ಷ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಅಶೋಕ್ ರಾವ್ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಮೂಡಬೆಟ್ಟು ಶಕ್ತಿ ಕೇಂದ್ರದ ನಿತಿನ್ ಮತ್ತು ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button