ಉಡುಪಿ: ರಾತ್ರಿ ಗುಡುಗು-ಮಿಂಚು ಸಹಿತ ಉತ್ತಮ ಮಳೆ

ಉಡುಪಿ: ತಾಲೂಕಿನ‌ ಆಸುಪಾಸಿನಲ್ಲಿ ಶನಿವಾರ ರಾತ್ರಿ ಉತ್ತಮ ಮಳೆಯಾಗಿದೆ. ಗಾಳಿ ಗುಡುಗು-ಮಿಂಚು ಸಹಿತ ತಡರಾತ್ರಿ ಧಾರಕಾರ ಮಳೆಯಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಕರಾವಳಿಯಲ್ಲಿ ಮಳೆಯ ವಾತಾವರಣ ಸೃಷ್ಟಿಯಾಗಿದ್ದು ರವಿವಾರ ಬೆಳಿಗ್ಗೆಯೂ ತುಂತುರು ಮಳೆಯೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿದೆ.

ಇನ್ನು ಬೆಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೇ 23ರವರೆಗೆ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.


Latest Indian news

Popular Stories