
Featured StoryUdupi
ಉಡುಪಿ | ನವೆಂಬರ್ 7 ವರೆಗೆ ಗುಡುಗು ಮಿಂಚು ಸಹಿತ ಭಾರೀ ಮಳೆ
ಉಡುಪಿ, ನ.5: ಮುಂದಿನ ಮೂರು ದಿನಗಳ ಕಾಲ ಉಡುಪಿ ಜಿಲ್ಲೆಗೆ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಈ ಸಮಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಉಡುಪಿ ಜಿಲ್ಲೆಯ ವಿವಿಧೆಡೆ ನವೆಂಬರ್ 4 ರಿಂದ 7 ರವರೆಗೆ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರುವಂತೆ ಉಡುಪಿ ಜಿಲ್ಲಾಡಳಿತ ಎಲ್ಲ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.




