
ಉಡುಪಿ ಸೇರಿ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ – ವಿಪರೀತ ಮಳೆ | ರಾಜ್ಯದಲ್ಲಿ ಆಗಸ್ಟ್ 1 ವರೆಗೆ ಭಾರೀ ಮಳೆ ಸಾಧ್ಯತೆ!
6 ಜಿಲ್ಲೆಗಳಿಗೆ ‘ರೆಡ್ ಅಲರ್ಟ್ ಘೋಷಿಸಲಾಗಿದ್ದು ರಾಜ್ಯದ ವಿವಿಧೆಡೆ ಇಂದು ಭಾರಿ ಮಳೆ ಮುಂದುವರಿದಿದೆ. ಹವಾಮಾನ
ಇಲಾಖೆಯು ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ.
ಉತ್ತರ ಕನ್ನಡ, ಕೊಡಗು, ಉಡುಪಿ, ದಕ್ಷಿಣ ಕನ್ನಡ,ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ‘ರೆಡ್ ಅಲರ್ಟ್ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ಹಾಸನ ಜಿಲ್ಲೆಗೆ ‘ಯೆಲ್ಲೊ
ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಯೂ ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜು. 16ರಿಂದ ಆಗಸ್ಟ್ 1ರವರೆಗೆ ರಾಜ್ಯದಲ್ಲಿ ಮತ್ತಷ್ಟು ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್ ಎನ್ ಡಿಎಂಸಿ) ಹೇಳಿದೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಕೇಂದ್ರ, ಜು. 16ರಿಂದ 24ರವರೆಗೆ ಕರಾವಳಿಯಲ್ಲಿ ಹಾಗೂ ಮಲೆನಾಡಿನ ಭಾಗದಲ್ಲಿ ದಟ್ಟವಾದ ಮಳೆ ಸುರಿಯಲಿದೆ. ಅದರ ಮರು ವಾರದಲ್ಲೇ, ಅಂದರೆ ಜು. 24ರಿಂದ ಆ. 1ರ ನಡುವೆ, ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ಬಳ್ಳಾರಿ, ಕೋಲಾರದಂಥ ಗಡಿಭಾಗದ ಜಿಲ್ಲೆಗಳೂ ಸಹ ಭಾರೀ ವರ್ಷಧಾರೆಯನ್ನು ಕಾಣಲಿವೆ ಎಂದು ಹೇಳಲಾಗಿದೆ.




