
Featured StoryUdupi
ನೇಜಾರು ಕೊಲೆ ಪ್ರಕರಣ: ಶಂಕಿತನನ್ನು ವಶಕ್ಕೆ ಪಡೆದಿದ್ದೇವೆ, ಹೆಚ್ಚಿನ ತನಿಖೆ ನಡೆಯುತ್ತಿದೆ – ಎಸ್ಪಿ ಉಡುಪಿ
ಉಡುಪಿ: ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಕುರಿತು ಉಡುಪಿ ಎಸ್ಪಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ
ಇಂದು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಅವರು, ಬೆಳಗಾವಿ ಪೊಲೀಸರ ಸಹಾಯದೊಂದಿಗೆ ಕುಡಚಿಯಿಂದ ಶಂಕಿತನೊರ್ವನನ್ನು ವಶಕ್ಕೆ ಪಡೆದಿದ್ದೇವೆ. ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು ಸಂಜೆಯೊಳಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.
ಅದಷ್ಟು ಬೇಗ ಪ್ರಕ್ರಿಯೆ ಮುಗಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ತಿಳಿಸಿದರು.




