
Featured StoryUdupi
ಉಡುಪಿ: ತಾಯಿ-ಮಗ ಆತ್ಮಹತ್ಯೆ
ಉಡುಪಿ, ಮೇ 17: ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದ ತಾಯಿ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಎಡ್ಲಿನ್ ಡೆಲಿಶಾ ಅಮ್ಮನ್ನ(83) ಹಾಗೂ ಅವರ ಮಗ ಸಬೆಸ್ಟಿನ್ ಅಮಿತ್ ಅಮ್ಮನ್ನ(46) ಆತ್ಮಹತ್ಯೆ ಮಾಡಿಕೊಂಡ ತಾಯಿಮಗ. ಮನೆಯಲ್ಲಿ ಇಬ್ಬರೇ ವಾಸ ಮಾಡಿಕೊಂಡಿದ್ದ ಇವರು, ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಫ್ಯಾನ್ ಮತ್ತು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಎಸ್ಸೈ ಮಹೇಶ್ ಪಿ.ಎಂ., ಎಎಸ್ಸೈ ವಿಜಯ, ಹೆಡ್ ಕಾನ್ಸ್‌ಸ್ಟೇಬಲ್ ಮರಿಗೌಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಹಕರಿಸಿದರು




