ಉಡುಪಿ: ಕೇಂದ್ರ ಬಜೆಟ್ ರಾಜ್ಯಕ್ಕೆ ಚೊಂಬು – ಕಾಂಗ್ರೆಸ್ ಪ್ರತಿಭಟನೆ

ಉಡುಪಿ, ಜು.26: ಕೇಂದ್ರ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದುಕೊಂಡು ಶುಕ್ರವಾರ ಉಡುಪಿ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

1001496681 Featured Story, State News


ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ವೃತ್ತದವರೆಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಚೊಂಬು ಹಿಡಿದು ಕೊಂಡು ಘೋಷಣೆಗಳನ್ನು ಕೂಗುತ್ತ ಮೆರವಣಿಗೆ ನಡೆಸಿದರು. ಬಳಿಕ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಬಡತನದಲ್ಲಿ ಭಾರತ ಇಂದು ಇಡೀ ಜಗತ್ತಿನಲ್ಲಿ 111ನೇ ಸ್ಥಾನದಲ್ಲಿದೆ. ದೇಶದಲ್ಲಿ ಇಂದು ನಿರುದ್ಯೋಗ ಶೇ.35ರಿಂದ ಶೇ.83ಕ್ಕೆ ಏರಿಕೆಯಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಬಜೆಟ್‌ನಲ್ಲಿ ಪ್ರತಿ ರಾಜ್ಯಗಳಿಗೂ ಶೇ.41ರಷ್ಟು ಅನುದಾನ ನೀಡ ಬೇಕಾಗಿದೆ. ಆದರೆ ಕೇಂದ್ರ ಸರಕಾರ ಕರ್ನಾಟಕಕ್ಕೆ ಅನುದಾನ ನೀಡದೆ ಅನ್ಯಾಯ ಎಸಗಿದೆ ಎಂದು ಆರೋಪಿಸಿದರು.


ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಪೂರ್ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾ ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ರಮೇಶ್ ಕಾಂಚನ್, ಅಮೃತ್ ಶೆಣೈ, ಅಣ್ಣಯ್ಯ ಶೇರಿಗಾರ್, ಎಂ.ಪಿ.ಮೊದಿನಬ್ಬ, ಇಸ್ಮಾಯಿಲ್ ಆತ್ರಾಡಿ, ವರೋನಿಕಾ ಕರ್ನೆಲಿಯೋ, ಗೀತಾ ವಾಗ್ಳೆ, ಗೋಪಿ ನಾಯ್ಕೆ, ದಿವಾಕರ್ ಕುಂದರ್, ಹರೀಶ್ ಕಿಣಿ, ಡಿ.ಆರ್.ರಾಜು ಮೊದಲಾದವರು ಉಪಸ್ಥಿತರಿದ್ದರು

Latest Indian news

Popular Stories