ಬೆಂಗಳೂರು: ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ; ತಪ್ಪಿದ ಭಾರಿ ದುರಂತ

ಬೆಂಗಳೂರು: ನಗರದ ಮೆಜೆಸ್ಟಿಕ್​​ (Mejestic) ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (KSR) ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ (Udyan Express Train) ಅಗ್ನಿ ಅವಘಡ ಸಂಭವಿಸಿದೆ.

ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಕೋಚ್​​​ಗಳಿಗೆ ಆವರಿಸಿದೆ. ಇದನ್ನು ಕಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಿಡೀರ್​​ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ , ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿದೆ. ರೈಲು ಬೆಳಗ್ಗೆ 6 ಗಂಟೆಗೆ ಕೆಎಸ್​ಆರ್​​ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 7.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ತಗುಲಿದ ಬೋಗಿಯಿಂದ ಉಳಿದ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಅದೃಷ್ಟವಶಾವತ್​  ಯಾವುದೆ ಪ್ರಯಾಣಿಕರು ರೈಲಿನಲ್ಲಿ ಇರಲಿಲ್ಲ.

Latest Indian news

Popular Stories