ಉಪ್ರ: ಮಹಿಳಾ ನ್ಯಾಯಾಧೀಶೆಯ ಮೇಲೆ ಲೈಂಗಿಕ ಕಿರುಕುಳ ಆರೋಪ | ತನ್ನ ಜೀವ ಕೊನೆಗೊಳಿಸಲು ಅನುಮತಿ ಕೊಡಿ – ಪ್ರಕರಣದ ಕುರಿತು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಂದ ವರದಿ ಕೋರಿಕೆ

 

ದೆಹಲಿ:ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಮಹಿಳಾ ನ್ಯಾಯಧೀಶರ ಬಹಿರಂಗ ಪತ್ರದ ನಂತರ ವರದಿ ಕೇಳಿದ್ದಾರೆ.ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶರು ಹಿರಿಯರಿಂದ ಲೈಂಗಿಕ ಕಿರುಕುಳವನ್ನು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಅನುಮತಿ ಕೋರಿದ್ದಾರೆ ಎಂದು ಹೇಳಲಾಗಿದೆ. ಈ ಪತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

“ದಯವಿಟ್ಟು ನನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ನನಗೆ ಅನುಮತಿ ನೀಡಿ” ಬಾಂಡಾದ ಮಹಿಳಾ ನ್ಯಾಯಾಧೀಶರು ಮುಖ್ಯ ನ್ಯಾಯಾಧೀಶರನ್ನು ಉದ್ದೇಶಿಸಿ ಪತ್ರದಲ್ಲಿ ಬರೆದಿದ್ದಾರೆ. ಜಿಲ್ಲಾ ನ್ಯಾಯಾಧೀಶರು ಮತ್ತು ಅವರ ಸಹಚರರಿಂದ ಬಾರಾಬಂಕಿಯಲ್ಲಿ ಲೈಂಗಿಕ ಕಿರುಕುಳ ನಡೆದಿರುವ ಕುರಿತು ಆರೋಪಿಸಿದ್ದಾರೆ.

“ನನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ನನ್ನನ್ನು ಸಂಪೂರ್ಣ ಕಸದಂತೆ ನಡೆಸಿಕೊಳ್ಳಲಾಗಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಈ ಪ್ರಕರಣವು ಇದೀಗ ಚರ್ಚೆಯನ್ನು ಹುಟ್ಟು ಹಾಕಿದ್ದು ನ್ಯಾಯಾಲಯದಲ್ಲೂ ನಡೆಯುತ್ತಿರುವ ಕೃತ್ಯದ ಕುರಿತು ಸಾರ್ವಜನಿಕರು ಖೇದ ವ್ಯಕ್ತಪಡಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಸೂಚನೆಯ ಮೇರೆಗೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದು ಮಹಿಳಾ ನ್ಯಾಯಾಧೀಶರ ಎಲ್ಲಾ ದೂರುಗಳ ಸ್ಥಿತಿಯ ಕುರಿತು ಇಂದು ಬೆಳಿಗ್ಗೆ ವರದಿಯನ್ನು ಕೇಳಿದ್ದಾರೆ.

Latest Indian news

Popular Stories