ಆಕ್ಷೇಪಾರ್ಹ ಪದ ಬಳಕೆ ಪ್ರಕರಣ: ಉಪೇಂದ್ರ ನಾಪತ್ತೆ – ಪೊಲೀಸರಿಂದ ಹುಡುಕಾಟ

ಬೆಂಗಳೂರು: ಫೇಸ್‌ಬುಕ್‌ ಲೈವ್‌ನಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ಆರೋಪದಲ್ಲಿ ನಟ ಉಪೇಂದ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಿಯಲ್ ಸ್ಟಾರ್ ಉಪ್ಪಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇಂದು ಬೆಳಗ್ಗೆ ಉಪೇಂದ್ರ ಅವರ ಮನೆಗೆ ಭೇಟಿ ನೀಡಿರುವ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಅಟ್ರಾಸಿಟಿ ಕೇಸ್ ಗಂಭೀರ ಸ್ವರೂಪ ಪಡೆದುಕೊಳ್ತಿದ್ದಂತೆ ನಟ ಉಪೇಂದ್ರ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಉಪೇಂದ್ರ ಅವರ ಮನೆಗೆ ಪೊಲೀಸರು ನೋಟಿಸ್ ನೀಡಲು ಹೋದಾಗ ಅವರ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಕತ್ರಿಗುಪ್ಪೆ ಹಾಗೂ ಸದಾಶಿವನಗರದಲ್ಲಿರುವ ಎರಡೂ ನಿವಾಸಕ್ಕೂ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಸ್ನೇಹಿತರು ಹಾಗೂ ಸಂಬಂಧಿಕರ ಸಂಪರ್ಕದಲ್ಲಿರುವ ಉಪೇಂದ್ರ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಟ ಉಪೇಂದ್ರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಾದ್ರೂ ಅರೆಸ್ಟ್ ಮಾಡುವ ಸಾಧ್ಯತೆ ಇದೆ. ಯಾಕಂದರೆ ಉಪೇಂದ್ರ ವಿರುದ್ಧ ಜಾಮೀನುರಹಿತ ಪ್ರಕರಣಗಳು ದಾಖಲಾಗಿವೆ. ಪೊಲೀಸರು ಕೂಡ ಸದ್ಯ ಉಪೇಂದ್ರ ಅವರನ್ನು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.  ಮೊಬೈಲ್ ಸ್ವಿಚ್ ಆಫ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಉಪ್ಪಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Latest Indian news

Popular Stories