Featured StoryEducation

ರಂಜಾನ್ ಮಾಸಾಚರಣೆ’ ಹಿನ್ನೆಲೆಯಲ್ಲಿ ‘ಉರ್ದು ಶಾಲೆ’ಗಳ ವೇಳಾಪಟ್ಟಿ ಬದಲಾವಣೆ ಮಾಡಿ ‘ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು: ರಂಜಾನ್ ಮಾಸಾಚರಣೆಯ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ, ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2022-23 ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶವಿರುತ್ತದೆ.

ಈಗ ಬೆಳಿಗ್ಗೆ 10 ರಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿ ಪಡಿಸಲಾಗಿರುತ್ತದೆ ಎಂದಿದ್ದಾರೆ.

ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2.45ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ 31-10-2002ರಲ್ಲಿ ಹೊರಡಿಸಲಾಗಿದ್ದು, ಸ್ಟಾಂಡಿಂಗ್ ಆರ್ಡರ್ ಅನ್ನು ಯಥಾವತ್ತು ಹೊರಡಿಸಲು ಸ್ವೀಕೃತವಾದ ಮನವಿಯನ್ನು ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

2022-23ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ದಿನಾಂಕ 10-04-2023ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ ಎಂದಿದ್ದಾರೆ.

ಹೀಗಿದೆ ಬದಲಾವಣೆಗೊಂಡ ಉರ್ದು ಶಾಲೆಗಳ ವೇಳಾಪಟ್ಟಿ

ಬೆಳಿಗ್ಗೆ 8 ಗಂಟೆಯಿಂದ 8.40ರವರೆಗೆ
8.40 ರಿಂದ 9.20ರವರೆಗೆ
9.20ರಿಂದ 10 ಗಂಟೆಯವರೆಗೆ
10 ಗಂಟೆಯಿಂದ 10.15ರವರೆಗೆ ವಿರಾಮ
10.15ರಿಂದ 10.55ರವರೆಗೆ
10.55ರಿಂದ 11.35ರವರೆಗೆ
11.35ರಿಂದ 12.10ರವರೆಗೆ
12.10ರಿಂದ 12.45ರವರೆಗೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button