ಉತ್ತರ ಪ್ರದೇಶ: ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಹುಲ್ ಗಾಂಧಿ ಭೇಟಿ

ಲಖನೌ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ಚಮ್ಮಾರ ಸಮುದಾಯದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ಭೇಟಿ ನೀಡಿದರು.

ರಾಹುಲ್ ಗಾಂಧಿ ಅವರು ಸುಲ್ತಾನ್‌ಪುರದ ಚಮ್ಮಾರನ ಅಂಗಡಿಗೆ ಭೇಟಿ ಮಾಡಿದ ಕಿರು ವಿಡಿಯೋವನ್ನು ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, “ಈ ಶ್ರಮಜೀವಿಗಳ ಹಕ್ಕುಗಳಿಗಾಗಿ ನಾವು ನಿರಂತರವಾಗಿ ಹೋರಾಡುತ್ತಿದ್ದೇವೆ. ಬೀದಿಗಳಿಂದ ಸಂಸತ್ತಿನವರೆಗೆ ಅವರ ಪರವಾಗಿ ಧ್ವನಿ ಎತ್ತುತ್ತಿದ್ದೇವೆ” ಎಂದು ಬರೆದುಕೊಂಡಿದೆ.

ರಾಹುಲ್ ಗಾಂಧಿ ಅವರು ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗಾಗಿ ಇಂದು ಸುಲ್ತಾನ್‌ಪುರದ ಶಾಸಕ-ಸಂಸದರ ನ್ಯಾಯಾಲಯಕ್ಕೆ ಹಾಜರಾದರು. ಅಲ್ಲಿಂದ ಲಖನೌಗೆ ಹಿಂತಿರುಗುವ ವೇಳೆ ವಿಧಾಯಕ ನಗರದಲ್ಲಿ ಚಮ್ಮಾರನ ಅಂಗಡಿಗೆ ಭೇಟಿ ಮಾತುಕತೆ ನಡೆಸಿದರು

ಚಮ್ಮಾರರ ಜೀವನೋಪಾಯ ಮತ್ತು ಜಾತಿ ತಾರತಮ್ಯದ ಹೋರಾಟವನ್ನು ಅರ್ಥಮಾಡಿಕೊಳ್ಳಲು ರಾಹುಲ್ ಗಾಂಧಿ ಅವರು ದಲಿತ ಚಮ್ಮಾರನೊಂದಿಗೆ ಸುಮಾರು 30 ನಿಮಿಷಗಳ ಕಾಲ ಮಾತನಾಡಿದರು ಎಂದು ಕಾಂಗ್ರೆಸ್‌ಗೆ ಸಂಬಂಧಿಸಿದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

Latest Indian news

Popular Stories