ನಾನಿನ್ನೂ ಯಾರ ಕೈಗೊಂಬೆಯಲ್ಲ: ಬಿಜೆಪಿ ನಾಯಕರ ವಿರುದ್ಧ ಹಿರಿಯ ಮುಖಂಡ ವಿ ಸೋಮಣ್ಣ ವಾಗ್ದಾಳಿ

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಪಕ್ಷದೊಳಗೆ ಅಥವಾ ಹೊರಗಿನವರ ಕೈಗೊಂಬೆಯಂತೆ ವರ್ತಿಸಲು ನನಗೆ ಸಾಧ್ಯವಿಲ್ಲ. ಏಕೆಂದರೆ, ನಾನು ಪಕ್ಷದ ‘ರಚನಾತ್ಮಕ ಕಾರ್ಯಕರ್ತ’ ಎಂದು ಬಿಜೆಪಿ ಹಿರಿಯ ಮುಖಂಡ ವಿ ಸೋಮಣ್ಣ ಬುಧವಾರ ದೃಢಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಳಿಕ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ‘ಅವಳಿ ಸೋಲಿನ ಆಘಾತದಿಂದ ನಾನು ಇನ್ನೂ ಹೊರಬಂದಿಲ್ಲ’ ಎಂದರು.

‘ನನ್ನ ಉಭಯ ಸೋಲು ನನಗೆ ಅನೇಕ ವಿಷಯಗಳನ್ನು ಕಲಿಸಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸುವಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ನಾನಿನ್ನು ಯಾರ ಕೈಗೊಂಬೆಯಲ್ಲ ಎಂದು ನಿಮಗೆ (ಮಾಧ್ಯಮಗಳಿಗೆ) ಹೇಳುತ್ತೇನೆ’ ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ವೈಯಕ್ತಿಕ ಲಾಭಕ್ಕಾಗಿ ಅಥವಾ ಅಧಿಕಾರಕ್ಕಾಗಿ ನಾನು ರಾಜಕೀಯಕ್ಕೆ ಬಂದಿಲ್ಲ. ಬದಲಿಗೆ ಜನರ ಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ. ಸಾರ್ವಜನಿಕ ಸೇವೆ ಮಾಡುವ ನನ್ನ ಬದ್ಧತೆಯು ಜಾತಿ, ಧರ್ಮ ಅಥವಾ ಯಾವುದೇ ಪಂಥದಿಂದ ಪ್ರಭಾವಿತವಾಗಿಲ್ಲ ಎಂದು ಅವರು ಒತ್ತಿಹೇಳುತ್ತಾರೆ.

 

Latest Indian news

Popular Stories