ಉಡುಪಿ: ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಪಕ್ಷ ಇತ್ತಿಚೇಗೆ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನಲೆಯಲ್ಲಿ ಜಿಲ್ಲಾ ಮಹಿಳಾ ಬಿಜೆಪಿ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ದ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಜುಲೈ 28 ರಂದು ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷೆ ವೀಣಾ ಶೆಟ್ಟಿಯವರು “ಮುಸ್ಲಿಂ ಹುಡುಗಿಯರನ್ನು ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲು ಮಾಡಬೇಡಿ ಬದಲಾಗಿ ಮದರಸಗಳಿಗೆ ಸೇರಿಸಲಿ” ಎಂದು ಹೇಳಿ ವಿವಾದ ಸೃಷ್ಟಿಯಾಗಿತ್ತು.
ಈ ಹಿನ್ನಲೆಯಲ್ಲಿ ಉಡುಪಿ ನಗರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.