ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998 ರಿಂದ 2015 ರವರೆಗೆ ಸುದ್ದಿ ಸಂಪಾದಕರಾಗಿದ್ದ ವಸಂತ್ ನಾಡಿಗೇರ್ ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.