Featured StoryNational

Vice-President Polls: ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣ NDA ಅಭ್ಯರ್ಥಿ | JP Nadda ಅಧಿಕೃತ ಘೋಷಣೆ!

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ತನ್ನ ಅಧಿಕೃತ ಅಭ್ಯರ್ಥಿ ಘೋಷಣೆ ಮಾಡಿದ್ದು, ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣ ಅವರ ಉಪ ರಾಷ್ಟ್ರಪತಿ ಹುದ್ದೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ಹೌದು.. ಇದೇ ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ದ ಅಭ್ಯರ್ಥಿಯಾಗಿ ಭಾರತೀಯ ಜನತಾ ಪಕ್ಷ ಭಾನುವಾರ ಘೋಷಿಸಿದೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿಯ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಮೈತ್ರಿಕೂಟದ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಎನ್‌ಡಿಎ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಅಧಿಕಾರ ನೀಡಿತ್ತು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button