ಶಾಲಾ ಬಸ್’ಗೆ ಬೆಂಕಿ: ತಪ್ಪಿದ ಮಹಾ ದುರಂತ!

ಹೊಸಪೇಟೆ: ಶಾಲಾ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗನೇ ಹೊತ್ತಿ ಉರಿದ ಘಟನೆ ಜಿಲ್ಲೆಯ ಕೊಟ್ಟೂರು ಪಟ್ಟಣದ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ಜೂ.15 ರ ಗುರುವಾರ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಖಾಸಗಿ ಸಂಸ್ಥೆಯ ಶಾಲೆಗೆ ಸೇರಿದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಹೊಗೆ‌ ಕಾಣಿಸಿಕೊಂಡಿದ್ದು, ಕೂಡಲೇ ಚಾಲಕ-ಸಿಬ್ಬಂದಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಕ್ಕಳನ್ನು ಕೆಳಗಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಬಗ್ಗೆ ವಿಷಯ‌ ತಿಳಿದು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು. ಅಷ್ಟರೊಳಗೆ ಬಸ್ ಸುಟ್ಟು ಕರಕಲಾಗಿದ್ದು, ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories