ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ

ವಿಜಯಪುರ: ಮಾರ್ಚ್ 2024ರಲ್ಲಿ ಜರಗಿದ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಬುಧವಾರದಂದು ಪ್ರಕಟವಾಗಿದ್ದು ವಿಜಯಪುರ ಜಿಲ್ಲೆ ಒಟ್ಟು 94.89% ಫಲಿತಾಂಶದೊಂದಿಗೆ ರಾಜ್ಯದಲ್ಲಿ 3ನೇ ಸ್ಥಾನವನ್ನು ಪಡೆದಿದೆ ಎಂದು ಜಿಲ್ಲಾಧಿಕಾರಿ ಟಿ. ಭೂ ಬಾಲನ್ ಹೇಳಿದರು.


ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರದಂದು ಪ್ರಕಟಗೊಂಡ ಜಿಲ್ಲೆಯ ದ್ವಿತೀಯ ಪಿ ಯು ಸಿ ಫಲಿತಾಂಶ ಕುರಿತು ಮಾತನಾಡಿ ಕಲಾ ವಿಭಾಗದಲ್ಲಿ 16,215 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 14,174 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 4,088 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 3,725 ವಿದ್ಯಾರ್ಥಿಗಳ ಉತ್ತೀರ್ಣರಾಗಿದ್ದಾರೆ. ಇನ್ನೂ ವಿಜ್ಞಾನ ವಿಷಯದಲ್ಲಿ 11,533 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಅದರಲ್ಲಿ 10,944 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು 5ನೇ ಸ್ಥಾನವನ್ನು ಹೊಂದಿತ್ತು. ಆದರೆ ಈ ವರ್ಷದ ಫಲಿತಾಂಶದಲ್ಲಿ ಸುಧಾರಣೆ ಕಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿರುತ್ತದೆ. ಮುಂದಿನ ವರ್ಷದಲ್ಲಿ ಮೊದಲನೇ ಸ್ಥಾನ ಪಡೆಯಲು ಜಿಲ್ಲಾಡಳಿತದಿಂದ ತಯಾರಿ ನಡೆಸಲಾಗುವುದು. ಜಿಲ್ಲೆಯ ಫಲಿತಾಂಶ ಸುಧಾರಣೆಯಲ್ಲಿ ಶ್ರಮವಹಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


ವಿಜಯಪುರದ ಎಸ್ ಎಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿಧ್ಯಾರ್ಥಿ ವೇದಾಂತ ನಾವಿ ಪ್ರತಿಶತ 99.33 ಅಂಕಗಳನ್ನು ಪಡೆದು ರಾಜ್ಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿರುವುದು ಸಂತಸ ತಂದಿದೆ ಎಂದರು.

Latest Indian news

Popular Stories