ವಿನೇಶ್ ಫೋಗಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನ ಫೈನಲ್‌ನಿಂದ ಹೊರಬಿದ್ದಿದ್ದಾರೆ.

50 ಕೆಜಿ ವಿಭಾಗದ ಫೈನಲ್‌ಗೆ ತಲುಪಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಪಂದ್ಯಕ್ಕೂ ಮುನ್ನ 100 ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ಅವರನ್ನು ಕ್ರೀಡಾಕೂಟದಿಂದ ಅನರ್ಹಗೊಳಿಸಲಾಗಿದೆ. ಈ ಕ್ರಮದ ನಂತರ ಇಡೀ ದೇಶ ವಿನೇಶ್ ಜೊತೆ ನಿಂತಿದೆ. ಪ್ರಧಾನಿ ಮೋದಿ ಕೂಡ ವಿನೇಶ್ ಬೆಂಬಲಕ್ಕೆ ಬಂದಿದ್ದು, ಸರ್ಕಾರದಿಂದ ಸಾಧ್ಯವಾಗುವುದೆಲ್ಲವನ್ನು ಮಾಡುವಾಗಿ ಭರವಸೆ ನೀಡಿದ್ದಾರೆ. ಇದೆಲ್ಲದರ ನಡುವೆ ವಿನೇಶ್ ಫೋಗಟ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರು ಪ್ರಸ್ತುತ ಪ್ಯಾರಿಸ್​ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ನಿರ್ಜಲೀಕರಣದಿಂದಾಗಿ ವಿನೇಶ್ ಅವರನ್ನು ಕ್ಲಿನಿಕ್‌ಗೆ ಕರೆದೊಯ್ಯಲಾಗಿದೆ. ವಿನೇಶ್ ಕ್ಲಿನಿಕ್‌ಗೆ ದಾಖಲಾಗಿರುವ ಸುದ್ದಿ ತಿಳಿದ ನಂತರ ಪಿಟಿ ಉಷಾ ಮತ್ತು ಭಾರತೀಯ ಅಧಿಕಾರಿಗಳ ತಂಡ ಅವರನ್ನು ಭೇಟಿ ಮಾಡಲು ಅಲ್ಲಿಗೆ ತೆರಳಿದೆ ಎಂಬ ಮಾಹಿತಿ ತಿಳಿದುಬಂದಿದೆ.

Latest Indian news

Popular Stories