ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರ ಮೇಲಿನ ದೌರ್ಜನ್ಯ ಎಸಗುವವರ ಮನೆಗಳಿಗೆ ಬುಲ್ಡೋಝರ್ – ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್

ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರ ಮೇಲಿನ ದೌರ್ಜನ್ಯ ಎಸಗುವವರ ಮನೆಗಳನ್ನು ಬುಲ್ಡೋಜರ್‌ ನಿಂದ ನಾಶಪಡಿಸುವುದಾಗಿ ತೆಲಂಗಾಣ ಘಟಕದ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಹೇಳಿದ್ದಾರೆ.

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬುಲ್ಡೋಜರ್ ಬಳಸಿ ಅಪರಾಧಿಗಳ ಮನೆಗಳನ್ನು ಕೆಡವಲು ಉತ್ತರ ಪ್ರದೇಶದ ಮಾದರಿಯನ್ನು ಅನುಸರಿಸುವುದಾಗಿ ಹೇಳಿದರು.

ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಹೈದರಾಬಾದ್‌ ನ ಪಕ್ಷದ ಕಚೇರಿಯಲ್ಲಿ ನಡೆದ ಅಹೋರಾತ್ರಿ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಹಿರಿಯರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಕಕ್ತಿಯಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಎಂಡಿ ವಿದ್ಯಾರ್ಥಿನಿ ಪ್ರೀತಿ ಸಾವಿನ ಬಗ್ಗೆ ಸಂಜಯ್ ಮಾತನಾಡಿದರು.

ಪ್ರೀತಿ ಸಾವಿನ ಪ್ರಕರಣವನ್ನು ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಅವರು ಪುನರುಚ್ಚರಿಸಿದರು. ಪ್ರೀತಿಗೆ ಕಿರುಕುಳ ನೀಡಿದ ಸೀನಿಯರ್ ಸೈಫ್‌ ಗೆ ಬಿಆರ್‌ ಎಸ್ ಸರ್ಕಾರ ಬೆಂಬಲ ಹಾಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಭಾನುವಾರ ಜನಗಾಂವ್ ಜಿಲ್ಲೆಯಲ್ಲಿ ಪ್ರೀತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಸಂಜಯ್, ಪ್ರೀತಿಯ ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.

Latest Indian news

Popular Stories