‘ಮಾನನಷ್ಟ ಮೊಕದ್ದಮೆ ಹೂಡುತ್ತೇವೆ’; ಗೋಮಾಂಸ ಭಕ್ಷಣೆ ಕುರಿತ ದಿನೇಶ್ ಗುಂಡೂರಾವ್ ಹೇಳಿಕೆಗೆ ಸಾವರ್ಕರ್ ಮೊಮ್ಮಗ, ಬಿಜೆಪಿ ನಾಯಕರ ಆಕ್ರೋಶ

ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಸ್ವತಃ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಚಿತ್ಪಾವನ ಬ್ರಾಹ್ಮಣರಾಗಿದ್ದರೂ ಅವರು “ಗೋಮಾಂಸ ಸೇವಿಸುತ್ತಿದ್ದರು” ಎಂದು ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆ ವ್ಯಾಪಕ ಟೀಕೆ ಮತ್ತು ಚರ್ಚೆಗೆ ಗ್ರಾಸವಾಗಿದೆ.

ಇನ್ನು ದಿನೇಶ್ ಗುಂಡೂರಾವ್ ಅವರ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು, ‘ಸಾವರ್ಕರ್ ಅವರ ಮಾನಹಾನಿ ಮಾಡುವುದು ಕಾಂಗ್ರೆಸ್ ತಂತ್ರವಾಗಿದೆ. ಅದರಲ್ಲೂ ವಿಶೇಷವಾಗಿ ಚುನಾವಣೆಗಳ ಹೊಸ್ತಿಲಲ್ಲಿ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಹಿಂದೂ ಸಮಾಜವನ್ನು ವಿವಿಧ ಜಾತಿಗಳಾಗಿ ವಿಭಜಿಸಲು ಬಯಸುತ್ತದೆ.

ಕಾಂಗ್ರೆಸ್ ಈಗ ತನ್ನ ನಿಜವಾದ ಮುಖವನ್ನು ತೋರಿಸುತ್ತಿದ್ದು, ಇದು ಬ್ರಿಟಿಷರ “ಒಡೆದು ಆಳುವ” ನೀತಿಯಾಗಿದೆ. ರಾಹುಲ್ ಗಾಂಧಿ ಇದನ್ನು ಮಾಡುತ್ತಿದ್ದರು ಮತ್ತು ಈಗ ಅವರ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಎಂದು ಅವರು ಹೇಳಿದರು.

ಅಂತೆಯೇ ವೀರ್ ಸಾವರ್ಕರ್ ಅವರು “ಗೋಮಾಂಸ ಸೇವಿಸುತ್ತಿದ್ದರು” ಎಂಬ ಹೇಳಿಕೆಗಳು ಸುಳ್ಳು ಎಂದು ರಂಜಿತ್ ಸಾವರ್ಕರ್ ಹೇಳಿದ್ದು, ಮಾತ್ರವಲ್ಲದೇ ಅವರ ಹೇಳಿಕೆಗಾಗಿ ಗುಂಡೂರಾವ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡುವುದಾಗಿ ಹೇಳಿದ್ದಾರೆ.

“ಸಾವರ್ಕರ್ ಅವರು ಗೋಮಾಂಸ ತಿನ್ನುತ್ತಾರೆ ಮತ್ತು ಗೋಹತ್ಯೆಯನ್ನು ಬೆಂಬಲಿಸುತ್ತಿದ್ದರು ಎಂಬ ಹೇಳಿಕೆ ಸುಳ್ಳು, ಮರಾಠಿಯಲ್ಲಿ ಅವರ ಮೂಲ ಲೇಖನದಲ್ಲಿ ಗೋವು ತುಂಬಾ ಉಪಯುಕ್ತವಾಗಿದ್ದು, ಆದ್ದರಿಂದ ಅವುಗಳನ್ನು ದೇವತೆಗಳೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದರು ಎಂಬ ಉಲ್ಲೇಖವಿದೆ. ಸಾವರ್ಕರ್ ಅವರು ಗೋರಕ್ಷಾ ಸಮ್ಮೇಳನದ ಅಧ್ಯಕ್ಷರೂ ಕೂಡ ಆಗಿದ್ದರು. ಹೀಗಾಗಿ ಕಾಂಗ್ರೆಸ್ ನಾಯಕರ ಹೇಳಿಕೆ ಶುದ್ಧ ಸುಳ್ಳು.. … ನಾನು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿಯೇ ಹೋಗುತ್ತೇನೆ ಎಂದು ರಂಜಿತ್ ಸಾವರ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾವರ್ಕರ್ ಬಗ್ಗೆ ಕಾಂಗ್ರೆಸ್ಸಿಗರಿಗೆ ಏನೂ ತಿಳಿದಿಲ್ಲ: ದೇವೇಂದ್ರ ಫಡ್ನವೀಸ್

ಇದೇ ವೇಳೆ ದಿನೇಶ್ ಗುಂಡೂರಾವ್ ಹೇಳಿಕೆ ಖಾರವಾಗಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ‘ಕಾಂಗ್ರೆಸ್‌ನಲ್ಲಿರುವವರಿಗೆ ಸಾವರ್ಕರ್ ಬಗ್ಗೆ ಏನೂ ತಿಳಿದಿಲ್ಲ ಮತ್ತು ಉದ್ದೇಶಪೂರ್ವಕವಾಗಿ ಅವರನ್ನು ಅವಮಾನಿಸುತ್ತಾರೆ. ರಾಹುಲ್ ಗಾಂಧಿ ಅವರು ಸಾವರ್ಕರ್ ಅವರ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುವ ಸರಣಿಯನ್ನು ಪ್ರಾರಂಭಿಸಿದರು ಮತ್ತು ಅವರ ನಾಯಕರು ಅದನ್ನು ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಕರ್ನಾಟಕ ಆರೋಗ್ಯ ಸಚಿವ ಗುಂಡೂರಾವ್ ರ ಹೇಳಿಕೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ‘”ಇಂತಹ ಜ್ಞಾನ” ಜನರು ತಮ್ಮ “ಮಾನಸಿಕ ಸಮತೋಲನ” ಕಳೆದುಕೊಂಡಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತದೆ. ಉತ್ತಮ “ಮಾನಸಿಕ ಸಂಸ್ಥೆ” ಗೆ ಹೋಗಿ ಚಿಕಿತ್ಸೆ ಪಡೆದರೆ ಒಳಿತು. ಸಮಾಜವು ಅವರನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಅವರು ಉತ್ತಮವಾಗಲು ಮತ್ತು ದೇಶದ ಮಹಾನ್ ವ್ಯಕ್ತಿಗಳ ಬಗ್ಗೆ ಜ್ಞಾನವನ್ನು ಪಡೆಯಲು ಮಾನಸಿಕ ಸಂಸ್ಥೆಗೆ ಹೋಗಬೇಕು ನಖ್ವಿ ಹೇಳಿದರು.

ಇದನ್ನೂ ಓದಿ

The Hindustan Gazette

Latest Indian news

Popular Stories