ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ರಾಜ್ಯದೆಲ್ಲೆಡೆ ಉಷ್ಣಾಂಶ ಹೆಚ್ಚಳ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಹೊತ್ತಿಗೆ ಶುಭ್ರ ಆಕಾಶವಿರಲಿದೆ, ರಾಜ್ಯದೆಲ್ಲೆಡೆ ಉಷ್ಣಾಂಶ ಸ್ವಲ್ಪ ಹೆಚ್ಚಾಗಿದೆ. ಫೆಬ್ರವರಿ ಆರಂಭದಲ್ಲೇ ಮುಂದಿನ ದಿನಗಳಲ್ಲಿ ಹವಾಮಾನ ಹೇಗಿರಬಹುದು ಎನ್ನುವ ಅಂದಾಜು ಸಿಕ್ಕಂತಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡು ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಚಳಿ ಇದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ 11.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಹರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Latest Indian news

Popular Stories