ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? – ಕುಮಾರ ಸ್ವಾಮಿ ಕಿಡಿ

ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಕಿಡಿಕಾರುವ ಮೂಲಕ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ ಬಗ್ಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ.

ಕರ್ನಾಟಕದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬಿಬಿಎಂ ಚುನಾವಣೆ ನಡೆದಿಲ್ಲ. ಜತೆಗೆ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಗಳು ನಡೆದಿಲ್ಲ. ಹೀಗಾಗಿ, ಕೇಂದ್ರ ಸಚಿವರು ಟ್ವೀಟ್‌ ಮಾಡಿ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಸೋಮವಾರ ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ” ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್‌ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ, ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ” ಎಂದು ಪ್ರಶ್ನೆ ಮಾಡಿದ್ದಾರೆ.

” ಮಾನ್ಯ ಸಿದ್ದರಾಮಯ್ಯನವರೇ ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ” ಎಂದು ಎಚ್‌ಡಿಕೆ ವಾಗ್ದಾಳಿ ನಡೆದಿದ್ದಾರೆ.

Latest Indian news

Popular Stories