ವಿಧಾನ ಪರಿಷತ್​ಗೆ ಕಾಂಗ್ರೆಸ್​ನಿಂದ ಟಿಕೆಟ್​ ಪಡೆದ ಬಿಲ್ಕಿಸ್​ ಬಾನೋ ಯಾರು? ಇಲ್ಲಿದೆ ಮಾಹಿತಿ

ವಿಧಾನಸಭೆಯಿಂದ ವಿಧಾನ ಪರಿಷತ್​ಗೆ (Legislative Council) ಜೂನ್ 13ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ (Congress)​ 8 ಸ್ಥಾನಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದೆ. ಇದರಲ್ಲಿ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯ ಬಿಲ್ಕಿಸ್​ ಬಾನೋ (Bilkis Bano) ಅವರಿಗೆ ಟಿಕೆಟ್ ನೀಡಿದೆ. ಈ ಪಟ್ಟಿಯಲ್ಲಿರುವ ಬಹುತೇಕರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಆದರೆ ಬಿಲ್ಕಿಸ್​ ಬಾನೋ ಅವರ ಹೆಸರು ಹೆಚ್ಚಿನ ಜನರಿಗೆ ತಿಳಿದಿಲ್ಲ. ಆದರೆ ಅವರು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನಲ್ಲಿ ಹಲವು ವರ್ಷಗಳಿಂದ ಗುರುತಿಸಿಕೊಂಡು, ಪಕ್ಷ ಸಂಘಟನೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಭದ್ರಾವತಿ ಮೂಲದವರಾಗಿರುವ ಬಲ್ಕೀಸ್ ಬಾನೋ, 1982ರಲ್ಲಿ ವಿದ್ಯಾರ್ಥಿಯಾಗಿದ್ದಾಗಲೆ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. 1986ರಲ್ಲಿ ಮೊದಲ ಬಾರಿಗೆ ಜಿಲ್ಲಾ ಪರಿಷತ್ ಗೆ ಆಯ್ಕೆಯಾದರು. 1992ರಲ್ಲಿ 2ನೇ ಬಾರಿಗೆ ಜಿಲ್ಲಾ ಪಂಚಾಯತಿಗೆ ಆಯ್ಕೆಯಾಗಿದರು. ಅದೇ ವರ್ಷ ಅಧ್ಯಕ್ಷೆಯಾಗಿ ಆಯ್ಕೆಯಾದರು.

1998ರಲ್ಲಿ ಶಿವಮೊಗ್ಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧೆ ಮಾಡಿ 34 ಮತಗಳಿಂದ ಸೋಲು ಕಂಡಿದ್ದರು. ನಂತರ ಕೆಪಿಸಿಸಿ ಮತ್ತು ಎಐಸಿಸಿ ಸದಸ್ಯೆಯಾಗಿ ಜವಾಬ್ದಾರಿ ನಿರ್ವಹಿಸಿದರು. 2013 ರಿಂದ 2016ರ ತನಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆಯಾಗಿ, ಆಯೋಗಕ್ಕೆ ಕಾನೂನಾತ್ಮಕ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಕೆಲವು ಸಮಯ ಕೆಪಿಸಿಸಿ ಪ್ರಧಾನ‌ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

Latest Indian news

Popular Stories