ಡಿ.5ರಿಂದ ಚಳಿಗಾಲ ಅಧಿವೇಶನ: ಬಂದೋಬಸ್ತ್‌ಗೆ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಳಗಾವಿ: ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಅವರು, ವಿಧಾನಮಂಡಲ ಅಧಿವೇಶನಕ್ಕೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

12 ಎಸ್ಪಿಗಳು, 42 ಡಿವೈಎಸ್ಪಿಗಳು ಮತ್ತು 100 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಒಟ್ಟು 5000 ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತತಿದ್ದು, ಪೊಲೀಸ್ ಸಿಬ್ಬಂದಿಗೆ ವಸತಿ ಕಲ್ಪಿಸಲು ಒಟ್ಟು 15 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

Latest Indian news

Popular Stories