ಮಂಗಳೂರು: ಈದ್ ಮಿಲಾದ್ ವಿಚಾರವಾಗಿ ಆರಂಭಗೊಂಡ ವಾಗ್ವಾದಗಳು ಮತ್ತೆ ಮುಂದುವರಿದಿದ್ದು, ಸೋಮವಾರ ಬಿಸಿರೋಡ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ.
ಬಿಸಿರೋಡ್‌ನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಬೆಳಗ್ಗಿನಿಂದಲೇ ಜಮಾಯಿಸಿದ ಸಂಘಪರಿವಾರದ ಕಾರ್ಯಕರ್ತರು ಆಡಿಯೋ ಸಂದೇಶ ರವಾನಿಸಿದವರು ತಾಕತ್ತಿದ್ದರೆ ಬರಲಿ ಎಂದು ಸವಾಲು ಹಾಕಿದ್ದಾರೆ.
ಅಲ್ಲದೇ ಪೊಲೀಸ್ ಬ್ಯಾರಿಕೇಡ್‌ಗಳನ್ನು ತಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಭದ್ರತೆಗಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.