Featured StoryState News

ಯರಗೋಳ್ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಸಿಎಂ ಆದೇಶ

ಕೋಲಾರ: ಯರಗೋಳ್ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯತಗೋಳ ಗ್ರಾಮದ ಬಳಿ ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿಯು 160 ಕೋಟಿ ವೆಚ್ಚದಲ್ಲಿ ಯರಗೋಳ ಡ್ಯಾಂ ನಿರ್ಮಾಣ ಮಾಡಿದೆ.

ಆದರೆ ಡ್ಯಾಂ ನಿರ್ಮಾಣ, ಪೈಪ್ ಲೈನ್ ಅಳವಡಿಕೆ, ಓವರ್ ಹೆಡ್ ಟ್ಯಾಂಕ್ ನಿರ್ಮಾಣದಲ್ಲಿ ನಿಗದಿಗಿಂತಲೂ ಹೆಚ್ಚುವರಿಯಾಗಿ ಹಣ ಮಂಜೂರು ಮಾಡಿದ ಆರೋಪ ಸಂಬಂಧ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ದೂರಿನ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button