ಯತ್ನಾಳ್ ಮಹಾನ್ ಸುಳ್ಳುಗಾರ, ಕೇವಲ ಆರೋಪ ಮಾಡುವುದಲ್ಲ, ಸಾಬೀತುಪಡಿಸಲಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದ ಧರ್ಮಾಧಿಕಾರಿ ಸೈಯದ್ ಮೊಹಮ್ಮದ್ ತನ್ವೀರ್ ಹಶ್ಮಿ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದು, ಆತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದರು.

ಈ ಕುರಿತು ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಹಳ ವರ್ಷಗಳಿಂದ ನನಗೆ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲ ಇವರು ಸುಮ್ಮನಿದ್ದಾರೆ. ಯತ್ನಾಳ್ ಮಹಾನ್ ಸುಳ್ಳುಗಾರ, ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ತನಿಖೆ ಮಾಡಿಸಲಿ ಎಂದು ತಿರುಗೇಟು ನೀಡಿದರು.

ಯತ್ನಾಳ್ ಗೆ ವಿಪಕ್ಷ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿಲ್ಲ ಎಂಬ ಬೇಸರ, ಹತಾಶೆ, ಸಿಟ್ಟಿನಿಂದ ಹೀಗೆಲ್ಲಾ ಮಾಡುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುವುದು, ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ ಈ ರೀತಿ ಸುಳ್ಳು ಆರೋಪಗಳನ್ನು ಮಾಡುವುದೇ ಅವರ ಕೆಲಸವಾಗಿದೆ ಎಂದು ತಿರುಗೇಟು ನೀಡಿದರು.

ಕೇಂದ್ರದಲ್ಲಿ ಅವರದೇ ಸರ್ಕಾರವಿದೆ. ಯತ್ನಾಳ್ ಆರೋಪ ಸಾಬೀತುಮಾಡಲಿ ಎಂದು ಹೇಳಿದ್ದಾರೆ. ಬರೀ ಆರೋಪ ಮಾಡುವುದಲ್ಲ, ಸಾಬೀತು ಮಾಡಲಿ ಎಂದರು.

Latest Indian news

Popular Stories