ನವದೆಹಲಿ: ಇಡಿ ವಿಚಾರಣೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ಹಾಜರು?

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಾಷ್ಟ್ರ ರಾಜಧಾನಿಯ ಇಡಿ ಕಚೇರಿ ಬಳಿ ಕಾಣಿಸಿಕೊಂಡಿದ್ದು, ವಿಚಾರಣೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ.

ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ಇಂದು ಬೆಳಗ್ಗೆ ಇಡಿ ಕಚೇರಿಗೆ ಆಗಮಿಸಿದ್ದು, ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿರುವ ಸಾಧ್ಯತೆಯಿರುವುದಾಗಿ ತಿಳಿದುಬಂದಿದೆ.

2021ರಲ್ಲಿ ಜಮೀರ್ ವಿರುದ್ಧ ತನಿಖೆ ಕೈಗೊಂಡಿದ್ದ ಜಾರಿ ನಿರ್ದೇಶನಾಲಯ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಸಮೀಪದ ಅವರ ಭವ್ಯವಾದ ಬಂಗಲೆಯ ಮೌಲ್ಯ ಮಾಪನ ನಡೆಸಿತ್ತು.  ಜಮೀರ್ ರೂ.40 ಕೋಟಿ ಮೌಲ್ಯ ಎಂದು ಘೋಷಿಸಿಕೊಂಡಿದ್ದರು. ಮಾರುಕಟ್ಟೆ ದರದಲ್ಲಿ ಅದು ಸುಮಾರು 80 ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುತ್ತದೆ ಎಂದು ಮೌಲ್ಯಮಾಪಕರು ವರದಿ ಸಲ್ಲಿಸಿದ್ದರು. 

Latest Indian news

Popular Stories