ಗದಗ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ : ಚಿಕಿತ್ಸೆ ಫಲಿಸದೇ 5 ವರ್ಷದ ಬಾಲಕ ಸಾವು

ಗದಗ : ರಾಜ್ಯಾದ್ಯಂತ ಡೆಂಗ್ಯೂ ಅಬ್ಬರ ಮುಂದುವರೆದಿದ್ದು, ಗದಗ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಕ್ಕೆ ಮೊದಲ ಬಲಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗದಗ ಜಿಲ್ಲೆಯ ಶಿರುಂಜ ಗ್ರಾಮದ ಚಿರಾಯಿ ಹೊಸಮನಿ ಎಂಬ ಬಾಲಕ ಡೆಂಗ್ಯೂ ಜ್ವರಕ್ಕೆ ಸಾವನ್ನಪ್ಪಿದ್ದಾನೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಚಿರಾಯಿ ಹೊಸಮನಿಯನ್ನು ಗದಗದ ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಧಾರವಾಡದ ಎಸ್‌ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಇನ್ನೂ ರಾಜ್ಯದಲ್ಲಿ ನಿನ್ನೆ ಒಂದೇ 175 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ರಾಜ್ಯಾದ್ಯಂತ ಒಟ್ಟು ಏಳು ಸಾವಿರ ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ.

Latest Indian news

Popular Stories