Gadag

ಗದಗ: ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಐವರು ದುರ್ಮರಣ

ಗದಗ :ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ.

ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ್ದು , ಟಾಟಾ ಸುಮೋದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹಲವಾರು ಮಂದಿ ಗಾಯಗೊಂಡಿದ್ದಾರೆ.ಮೃತರು ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು . ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button