Gadag

ಗದಗ: ನಗರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ,ಬಾಲಮಂದಿರ ಉದ್ಘಾಟನೆ ಹಾಗೂ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿ

ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಪ್ರಯಾಣಿಸಲಿದ್ದು ಗದಗದಲ್ಲಿ ನೂತನವಾಗಿ ನಿರ್ಮಿಸಿದ ಬಾಲಕಿಯರ ಬಾಲ ಮಂದಿರವನ್ನು ಉದ್ಘಾಟಿಸಿ ನಂತರ ಖಾಸಗಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿಯಿಂದ ಹೆಲಿಕ್ಯಾಪ್ಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಗದಗ ನಗರಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 10:45 ಕ್ಕೆ ಗದಗ ನಗರಕ್ಕೆ ಮುಖ್ಯಮಂತ್ರಿ ಆಗಮಿಸಲಿದ್ದು ಜಿಲ್ಲಾಡಳಿತ ಭವನ ಆವರಣದ ಹೆಲಿ ಪಾಡಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 11ಗಂಟೆಗೆ ಬಾಲಕಿಯರ ಬಾಲ ಮಂದಿರ ಉದ್ಘಾಟಿಸಲಿದ್ದಾರೆ, ಸಂಭಾಪುರ ರಸ್ತೆಯ ಬಳಿ ನೂತನವಾಗಿ ನಿರ್ಮಾಣಗೊಂಡ ಬಾಲಕಿಯರ ಬಾಲ ಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದು, ಬಳಿಕ ಆಪ್ತ ರಾಮಕೃಷ್ಣ ರೋಳಿ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಬೆಳಗ್ಗೆ 11:45 ಕ್ಕೆ ಗದಗದಿಂದ ಹುಬ್ಬಳ್ಳಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣಿಸಲಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button