ಸಿದ್ದರಾಮಯ್ಯ ಉತ್ತಮ ಬಜೆಟ್ ಕೊಡಲಿದ್ದಾರೆ: ಸಚಿವ ಎಚ್.ಕೆ.ಪಾಟೀಲ್‌

ಗದಗ (ಫೆ.12): ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾದ ಬಜೆಟ್ ಮಂಡಿಸಲಿದ್ದು, ಗದಗ ಜಿಲ್ಲೆಗೂ ವಿಶೇಷ ಕೊಡುಗೆಗಳು ಸಿಗುವ ವಿಶ್ವಾಸವಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್‌ ಹೇಳಿದರು. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೆಚ್ಚುವರಿಯಾಗಿ 60 ಸಾವಿರ ಕೋಟಿ ರು.

ಹೊರೆ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರು ಎಲ್ಲವನ್ನೂ ಅಳೆದು ತೂಗಿ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದ್ದಾರೆ. ಡಂಬಳಕ್ಕೆ ತೋಟಗಾರಿಕೆ ಕಾಲೇಜು ಮಂಜೂರು ಮಾಡುವಂತೆ ಒತ್ತಾಯಿಸಲಾಗಿದೆ.

ಅದೇ ರೀತಿ, ಜಿಲ್ಲೆಗೆ ಎಂಜಿನಿಯರಿಂಗ್‌ ಕಾಲೇಜುಗಳನ್ನು ನೀಡುವಂತೆ ಕೇಳಲಾಗಿದೆ. ಗ್ಯಾರಂಟಿ ಭಾರದ ನಡುವೆಯೂ ಹೊಸ ಯೋಜನೆಗಳನ್ನು ಗದಗ ಜಿಲ್ಲೆಗೆ ಅಪೇಕ್ಷಿಸಲಾಗಿದೆ ಎಂದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಧೂಳು ತಿನ್ನುತ್ತಿದ್ದ ಕಡತಗಳಿಗೆ ಮುಕ್ತಿ ನೀಡುವ ಸಂಕಲ್ಪ ಹೊಂದಿದ್ದು, ಹಳೆ ಕಡತಗಳಿಗೆ ಹೊಸ ಸ್ಪರ್ಶದ ಮೂಲಕ ಮುಕ್ತಿ ನೀಡಲು ಕ್ರಮವಹಿಸಿದೆ. ಅದರ ಭಾಗವಾಗಿಯೇ ಈಚೆಗೆ ಮುಂಡರಗಿಯಲ್ಲಿ ನಡೆದ ತಾಲೂಕು ಮಟ್ಟದ ಜನತಾ ದರ್ಶನದಲ್ಲಿ 331 ಅರ್ಜಿಗಳು ಸ್ವೀಕೃತ ಆಗಿದ್ದವು. ಆ ಸಂದರ್ಭದಲ್ಲಿ ಏಳು ದಿನಗಳ ಒಳಗಾಗಿ ಶೇ 95ರಷ್ಟು ಅರ್ಜಿ ವಿಲೇವಾರಿ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು.

Latest Indian news

Popular Stories