ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಲಾಗಿದೆ.
ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಸೂರಜ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ಆಸ್ಪತ್ರೆಗೆ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸೂರಜ್ ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕು ಗನ್ನಿಕಡ ಬಳಿ ಇರುವ ತೋಟದ ಮನೆಗೆ ಜೂ. 16ರಂದು ನನ್ನನ್ನು ಕರೆಸಿಕೊಂಡು ನನ್ನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಅರಕಲಗೂಡು ತಾಲೂಕಿನ ಜೆಡಿಎಸ್ ಕಾರ್ಯಕರ್ತನೊಬ್ಬ ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.