ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ವಾರ್ತಾ ಇಲಾಖೆ ವತಿಯಿಂದ ಪತ್ರಕರ್ತರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ವಾಹನ ಬ್ರೇಕ್ ಫೇಲ್ ಆಗಿದೆ. ಬ್ರೇಕ್ ಫೇಲ್ ಆದ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ.
ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಚಲಿಸುತ್ತಿದ್ದ ಲಾರಿಗೆ ವಾಹನ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ 7 ಜನ ಪತ್ರಕರ್ತರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ