ಹಾಸನದ ಮಂಜುನಾಥ್ಆ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ರೋಗಿಗಳು ಪಾರು

ಹಾಸನ: ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಹಾಸನ ನಗರದ ಶಂಕರಮಠ ರೋಡ್ ನಲ್ಲಿರುವ ಮಂಜುನಾಥ್ ಆಸ್ಪತ್ರೆಯ ಎಕ್ಸ್ ರೇ ರೂಂ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಯ ಕಿಟಕಿ ಗಾಜುಗಳನ್ನು ಒಡೆದು ಸಿಬ್ಬಂದಿಗಳು ಪ್ರಾಣ ರಕ್ಷಿಸಿಕೊಂಡಿದ್ದಾರೆ.ಕೂಡಲೇ ರೋಗಿಗಳನ್ನು ಆಸ್ಪತ್ರೆಯಿಂದ ಹೊರ ತರಲಾಗಿದೆ. ಬೆಂಕಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Latest Indian news

Popular Stories