ಹಿಟ್ & ರನ್ ಗೆ ಮಾವ-ಅಳಿಯ ಬಲಿ

ಹಾಸನ: ಹಿಟ್ & ರನ್ ಪ್ರಕರಣದಲ್ಲಿ ಮಾವ ಹಾಗೂ ಅಳಿಯ ಇಬ್ಬರೂ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಾಸ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಮಾವ ಹಾಗೂ ಅಳಿಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೇಲೂರು ತಾಲೂಕಿನ ದೇವಿಹಳ್ಳಿ ನಿವಾಸಿ ಜವರಯ್ಯ (65) ಹಾಗೂ ಅರಸಿಕೆರೆ ತಾಲೂಕಿನ ನಾಗೇನಹಳ್ಳಿ ನಿವಾಸಿ ಮಧು (35) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories