ರಾಜ್ಯಸಭಾ’ ಚುನಾವಣೆಯಲ್ಲಿ ‘ಕಾಂಗ್ರೆಸ್’ ಗೆ ಮತ ಹಾಕಿದವರಿಗೆ ಸರ್ಕಾರ ‘ಬೆಂಬಲ’ : ಡಿಸಿಎಂ ಡಿಕೆ ಶಿವಕುಮಾರ್

ಹಾಸನ : ಇತ್ತೀಚಿಗೆ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೇರೆ ಪಕ್ಷದವರು ಮತ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ಗೆ ಯಾರು ಮತ ಹಾಕಿದ್ದಾರೆ ಎಂಬುದು ಕುರಿತು ಮಾಹಿತಿ ಇಲ್ಲ ಆದರೆ ಮತ ಹಾಕಿದವರಿಗೆ ಸರ್ಕಾರ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಗೆ ಮತ ಹಾಕಿದವರಿಗೆ ಸರ್ಕಾರದಿಂದ ಬೆಂಬಲ ನೀಡುತ್ತೇವೆ ಜೆಡಿಎಸ್ ಜೊತೆ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ ಆದ್ದರಿಂದ ಅವರ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಬೆಂಬಲ ನೀಡುತ್ತದೆ ಎಂದು ಹಾಸನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕಳೆದ ಕೆಲವು ದಿನಗಳ ಹಿಂದೆ ರಾಜ್ಯಸಭೆಯ ನಾಲ್ಕು ಸ್ಥಾನಗಳು ಹೀಗೆ ಚುನಾವಣೆ ನಡೆದಿತ್ತು ಇದರಲ್ಲಿ ಅಜಯ್ ಮಕೆನ್ ಗೆ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಮತ ಹಾಕುವ ಮೂಲಕ ಬಾರಿ ಸಂಚಲನ ಸೃಷ್ಟಿಸಿದ್ದಾರೆ. ಇದನ್ನು ವಿರೋಧಿಸಿದ ಬಿಜೆಪಿ ನಾಯಕರು ಅವರ ವಿರುದ್ಧ ಕಾನೂನು ಕ್ರಮಕ್ಕೆ ಕೈಗೊಳ್ಳಲು ಇದೀಗ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

Latest Indian news

Popular Stories