
Hassan
ಇಸ್ರೇಲ್ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ :ಎಚ್. ಡಿ. ದೇವೇಗೌಡ
ಹಾಸನ (ಅ.9): ಕಳೆದ ಶನಿವಾರ ಪ್ಯಾಲೆಸ್ತೀನ ಹಮಾಸ್ ಉಗ್ರರು ಇಸ್ರೇಲ್ ಮೇಲೆ ಏಕಾಏಕಿ 5000ಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದಾರೆ.ಸಾವಿರಾರು ಜನರು ಸಾವನ್ನಪ್ಪಿದ್ದಾರೆ, ಬಾಂಬ್ ದಾಳಿಗೆ ನೂರಾರು ಕಟ್ಟಡಗಳು ನೆಲಕ್ಕುರುಳಿವೆ. ಇದಕ್ಕೆ ಹಮಾಸ್ ಮೇಲೆ ಪ್ರತಿದಾಳಿ ನಡೆಸುವ ಮೂಲಕ ಇಸ್ರೇಲ್ ಯುದ್ಧ ಘೋಷಣೆ ಮಾಡಿದೆ.
ಉದ್ಯೋಗ, ಪ್ರವಾಸಕ್ಕಾಗಿ ಇಸ್ರೇಲ್ಗೆ ತೆರಳಿದ್ದ ಭಾರತೀಯರು ಯುದ್ಧಭೂಮಿಯಲ್ಲಿ ಸಿಲುಕಿಕೊಂಡಿದ್ದಾರೆ. ಅದರಲ್ಲೂ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಹಾಸನ ಜಿಲ್ಲೆಯ ಕೆಲವರು ಇಸ್ರೇಲ್ನಲ್ಲಿ ಸಿಲುಕಿರುವುದು ತಿಳಿದುಬಂದಿದೆ.ಉದ್ಯೋಗ, ಪ್ರವಾಸಕ್ಕಾಗಿ ಇಸ್ರೇಲ್ಗೆ ತೆರಳಿದ್ದ ಭಾರತೀಯರು ಯುದ್ಧಭೂಮಿಯಲ್ಲಿ ಸಿಲುಕಿಕೊಂಡಿದ್ದಾರೆ. ಅದರಲ್ಲೂ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಇಸ್ರೇಲ್ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದರು.




