ಸಾಲಭಾದೆ ತಾಳಲಾರದೆ 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿದ ದಂಪತಿ, ಮೂವರು ಮೃತ್ಯು

ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆರೆಬೀದಿಯಲ್ಲಿ ನಡೆದಿದೆ. ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿ ಗಂಡ-ಹೆಂಡತಿ ಹಾಗೂ ಪುತ್ರಿ ಸಾವನ್ನಪ್ಪಿದ್ದಾರೆ.

ಮೃತರನ್ನು 43 ವರ್ಷದ ಶ್ರೀನಿವಾಸ್, 36 ವರ್ಷದ ಶ್ವೇತಾ ಹಾಗೂ 13 ವರ್ಷದ ನಾಗಶ್ರೀ ಎಂದು ಗುರುತಿಸಲಾಗಿದೆ.

ಮೃತ ಶ್ರೀನಿವಾಸ್ ಕಾರು ಚಾಲಕರಾಗಿದ್ದು, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಕೆಲಸ ಮಾಡುತ್ತಿದ್ದರು. ಕಳೆದ ಮಂಗಳವಾರ ಮೂವರು ಕಾಣಿಯಾಗಿದ್ದರು, ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ಮಿಸ್ಸಿಂಗ್ ಕಂಪ್ಲೇಟ್ ಕೊಟ್ಟಿದ್ದರಂತೆ. ಈ ವೇಳೆ ಮೃತ ಶ್ರೀನಿವಾಸ್ ಸಾಕಷ್ಟು ಸಾಲ ಮಾಡಿಕೊಂಡಿದ್ದರಂತೆ.

ಆದರೆ ನಿನ್ನೆ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಸ್ಮೀತಾ ಶವ ಪತ್ತೆಯಾಗಿದೆ. ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದು, ಶವವನ್ನು ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು ಹೊರ ತೆಗೆದಿದ್ದಾರೆ. ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದ್ದು, ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ, ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Indian news

Popular Stories