Hassan

ಮೂರು ಪಿ.ಡಿ.ಓ ಗಳನ್ನು ಅಮಾನತು‌ ಮಾಡಿ ಆದೇಶ

ದಿ ಹಿಂದುಸ್ತಾನ್ ಗಝೆಟ್

ಹಾಸನ: ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಮೂವರು ಪಿಡಿಒ(PDO)ಗಳನ್ನು ಅಮಾನತು(Suspension) ಮಾಡಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪ‌ ಕೇಳಿಬಂದಿತ್ತು. ಈ ಹಿನ್ನಲೆ ಡಿ.ಕಾಳೇನಹಳ್ಳಿ ಪಿಡಿಒ C.N.ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅಮಾನತುಗೊಂಡವರು. ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು. ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಾಡಿಕೊಟ್ಟಿದ್ದಾರೆಂಬ ಆರೋಪ‌ದ ಮೇಲೆ, ಅಮಾನತು ಮಾಡಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button