ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ: ಹಾಸನದಲ್ಲಿ ಸಾವಿರಾರು ಮಂದಿ ಪ್ರತಿಭಟನೆ

ಹಾಸನ : ಅತ್ಯಾಚಾರ, ಲೈಂಗಿಕ ಕಿರುಕುಳ ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ವಿಡಿಯೋಗ್ರಾಫಿಂಗ್ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕರ್ನಾಟಕದಾದ್ಯಂತ ಸುಮಾರು ಐದರಿಂದ ಏಳು ಸಾವಿರ ಜನರು ಗುರುವಾರ ಹಾಸನದ ಬೀದಿಗಳಲ್ಲಿ ರ್ಯಾಲಿ ನಡೆಸಿದರು.

ಫೆಡರೇಶನ್ ಆಫ್ ಕರ್ನಾಟಕ ಸ್ಟೇಟ್ ಪೀಪಲ್ಸ್ ಮೂವ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಹೇಮಾವತಿ ವೃತ್ತದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯದಾದ್ಯಂತ ಸುಮಾರು 113 ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಪ್ರತಿಭಟನೆಯಲ್ಲಿ ಮುಖ್ಯ ಅತಿಥಿಯಾಗಿದ್ದ ಆಲ್ ಇಂಡಿಯಾ ಡೆಮಾಕ್ರಟಿಕ್ ವುಮೆನ್ಸ್ ಅಸೋಸಿಯೇಷನ್ ಉಪಾಧ್ಯಕ್ಷೆ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ನಾಯಕಿ ಸುಭಾಷಿಣಿ ಅಲಿ, ಯಾವುದೇ ಕಾರಣಕ್ಕೂ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸಬೇಕು ಎಂಬುದು ಈ ಹೋರಾಟದ ದೊಡ್ಡ ಬೇಡಿಕೆಯಾಗಿದೆ. ಜಾಮೀನು ಇಲ್ಲ, ಜೈಲು ಮಾತ್ರ” ಎಂದು ಅವರು ಹೇಳಿದರು.

Latest Indian news

Popular Stories