ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್, ಬಾರ್ ಗಳ ಮೇಲೆ ‘SIT’ ದಾಳಿ

ಹಾಸನ : ಹಾಸನ ಸಂಸದ ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತರನ್ನು ಎಸ್‌ಐಟಿ ಬಂಧಿಸಿದ್ದು, ಇದೀಗ ಎಸ್‌ಐಟಿ ಪ್ರೀತಮ್ ಗೌಡ ಆಪ್ತರ ಹೋಟೆಲ್ ಹಾಗೂ ಬಾರ್ ಗಳ ಮೇಲೆ ಎಸ್‌ಐಟಿ ದಾಳಿ ಮಾಡಿದೆ.

ಹೌದು ಪ್ರಜ್ವಲ್ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಎರಡು ಕಡೆಗಳಲ್ಲಿ ಸಾಕ್ಷಿ ಸಿಗಬಹುದಾ ಎನ್ನುವ ಉದ್ದೇಶದಿಂದ ಎಸ್‌ಐಟಿ ಅಧಿಕಾರಿಗಳು ಇದೀಗ ಪ್ರೀತಮ್ ಗೌಡ ಆಪ್ತರ ಹೋಟೆಲ್ ಹಾಗೂ ಬಾರ್ ಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.

ಪ್ರೀತಮ್ ಗೌಡ ಆಪ್ತರ ಹೋಟೆಲ್ ಹಾಗೂ ಬಾರ್ ಗಳ ಮೇಲೆ ಎಸ್‌ಐಟಿ ದಾಳಿ ನಡೆಸಿದೆ. ಹಾಸನದ ಎರಡು ಕಡೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶರತ್ ಒಡೆತನದ ಕ್ವಾಲಿಟಿ ಬಾರ್ ಹಾಗೂ ಕಿರಣ್ ಒಡೆತನದ ಹೋಟೆಲ್ ಹಾಗೂ ಬಾರ್ ಮೇಲೆ ಎಸ್‌ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ

Latest Indian news

Popular Stories