ಹಾಸನ, ಫೆಬ್ರವರಿ 05: ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರ ಆಗಬೇಕು ಎಂಬ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ, ಒಡೆದು ಆಳುವ ರಾಜಕಾರಣವನ್ನೇ ಮಾಡಿಕೊಂಡು ಬಂದಿರುವ ಕಾಂಗ್ರೆಸ್‌ಗೆ ಒಟ್ಟುಗೂಡಿಸಿ ಅಭ್ಯಾಸನೇ ಇಲ್ಲ ಎಂದು ಸಿಟಿ ರವಿ ತಿರುಗೇಟು ನೀಡಿದರು.
ಈ ಕುರಿತು ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಹುಲ್‌ಗಾಂಧಿ ಅವರ ಯಾತ್ರೆಗೆ ‘ಭಾರತ್ ತೋಡೊ ಯಾತ್ರೆ’ ಅಂತ ಇಟ್ಟಿದ್ದರೆ ಡಿ.ಕೆ.ಸುರೇಶ್ ಅವರ ಹೇಳಿಕೆಗಳಿಗೆ ತಾತ್ವಿಕವಾದ ಬಲ ಬರುತ್ತಿತ್ತು.
ಜೋಡೊ ಅಂತ ಹೇಳ್ತಿ ದೇಶ ಒಡೆಯುವ ಮಾತನಾಡುವುದುವಎಷ್ಟು ಸರಿ? ರಾಷ್ಟ್ರ ಒಡೆಯುವ ಮಾತನ್ನು ಡಿ.ಕೆ.ಸುರೇಶ್ ಹೇಳಿದರೆ, ಜಾತಿ- ಜಾತಿ ನಡುವೆ ಒಡೆಯುವ ರಾಜಕಾರಣವನ್ನು ಸಿದ್ದರಾಮಯ್ಯ ಆದಿಯಾಗಿ ಮಾಡಿಕೊಂಡು ಬಂದಿದ್ದಾರೆ. ಸಿದ್ದರಾಮಯ್ಯ ಅವರು ಅಪರೂಪಕ್ಕೊಮ್ಮೆ ಮನುಷ್ಯತ್ವ ಇರಬೇಕು ಅಂತಾರೆ.
ಆದರೆ ಮಾಡೋದೆಲ್ಲಾ ಜಾತಿ ರಾಜಕಾರಣ ಎಂದು ವಾಗ್ದಾಳಿ ನಡೆಸಿದರು. ಬಡವರು ಎಲ್ಲಾ ಜಾತಿಯಲ್ಲೂ ಇದ್ದಾರೆ. ಯಾಕೆ ಅವರು ಬಡವರ ಪರ ಯೋಚನೆ ಮಾಡಲ್ಲ. ಬಡವರ ಪರವಾಗಿ ಏಕೆ ಮಾತನಾಡಲ್ಲ? ಜಾತಿಯನ್ನೆ ಇಟ್ಕಂಡು ಏಕೆ ಮಾತಾನಾಡುತ್ತಾರೆ? ಎಂದು ಪ್ರಶ್ನಿಸಿ? ಎಲ್ಲಾ ಜಾತಿಯಲ್ಲೂ ಒಳ್ಳೆವರೂ ಇದ್ದಾರೆ, ಕೆಟ್ಟವರೂ ಇದ್ದಾರೆ.
ಹಾಗಾದರೆ ಜಾತಿ, ದ್ವೇಷ ಯಾಕೆ ? ಜಾತಿ ಒಡೆದು ರಾಜಕಾರಣ ಮಾಡೋದು, ಭಾಷೆ ಹೆಸರಿನಲ್ಲಿ ರಾಜಕಾರಣ ಮಾಡೋದು ಕಾಂಗ್ರೆಸ್ ಕಲ್ಚರ್, ಆ ಕಾಂಗ್ರೆಸ್ ಸಂಸ್ಕೃತಿಯನ್ನೇ ಡಿ.ಕೆ.ಸುರೇಶ್ ಹೇಳಿದ್ದಾರೆ ಎಂದರು. CT Ravi on Budget: ಮೇಲುನೋಟಕ್ಕೆ ಸಕ್ಕರೆ ಕೊಟ್ಟು ಒಳಗಡೆ ಕಹಿ ಉಣಿಸುವ ಬಜೆಟ್: ಸಿ ಟಿ ರವಿಸಂಕುಚಿತ ಮನೋಭಾವ ಇರುವವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ
ದೇಶ ಒಡೆತೀವಿ ಅಂತ ಹೊರಟ ಜಿನ್ನಾಗೆ ಇವರು ಬೆಂಬಲ ಕೊಟ್ಟರು. ಅದಾದ ನಂತರ ಸರ್ದಾರ್ ಪಟೇಲ್ ದೇಶವನ್ನು ಒಗ್ಗೂಡಿಸಿದರು ರಜಾಕರು, ಹೈದರಾಬಾದ್ ನಿಜಾಮನ ಮನಸ್ಥಿತಿಯವರಂತೆ ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್ ವರ್ತಿಸಬಾರದು. ಅಕಸ್ಮಾತ್ ವರ್ತಿಸಿದರೆ ನೀವು ನಿಜಾಮ ಅಲ್ಲ, ನಿಜಾಮನನ್ನೇ ಬಗ್ಗು ಬಡಿದಂತಹ ಸರ್ದಾರ್ ವಲ್ಲಭಾಯಿ ಪಟೇಲ್ ರಂತಹ ನೇತೃತ್ವ ಭಾಜಪ ಕೈಯಲ್ಲಿ ಇದೆ.
ನಿಮ್ಮ ನಿಜಾಮಗಿರಿ ಇಲ್ಲಿ ನಡೆಯಲ್ಲ ಎಂದರು.ಫೆ.7 ರಂದು ದೆಹಲಿಯಲ್ಲಿ ಅವರು ಪ್ರತಿಭಟನೆ ಮಾಡಲಿ, ಪ್ರತಿಭಟನೆ ಮಾಡಲು ಎಲ್ಲರಿಗೂ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಅಂಕಿ-ಅಂಶಗಳನ್ನು ಮುಂದಿಟ್ಟು ಜನರಿಗೆ ಮನವರಿಕೆ ಮಾಡ್ತೀವಿ. ಅವರು ಹೇಳುವುದರಲ್ಲಿ ಎಷ್ಟು ಸತ್ಯ ಇದೆ, ಎಷ್ಟು ಸುಳ್ಳು ಇದೆ ಅನ್ನೋದನ್ನ ಜನರ ಮುಂದೆ ಇಡ್ತಿವಿ. ಇಲ್ಲಿ ಪ್ರತಿಭಟನೆ ಮಾಡಲು ಹಕ್ಕಿದೆ. ದೇಶ ಒಡೆಯಲು ಹಕ್ಕಿಲ್ಲ ಎಂದರು.