ಈಗ ರಾಜ್ಯದಲ್ಲಿ ಜಾತ್ಯತೀತ ಪಕ್ಷವಾಗಿ ಉಳಿದಿರುವುದು ಕಾಂಗ್ರೆಸ್‌ ಒಂದೇ – ಜಮೀರ್ ಅಹ್ಮದ್

ಹಾಸನ: ಈಗ ರಾಜ್ಯದಲ್ಲಿ ಜಾತ್ಯತೀತ ಪಕ್ಷವಾಗಿ ಉಳಿದಿರುವುದು ಕಾಂಗ್ರೆಸ್‌ ಒಂದೇ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮದ್‌ ಖಾನ್ ಹೇಳಿದ್ದಾರೆ.

ಅರಸೀಕೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮದ್ ಅವರು , ‘ರಾಜ್ಯದಲ್ಲಿ ಜನತಾದಳ ತನ್ನನ್ನು ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದುದರಿಂದ ಕಾಂಗ್ರೆಸ್‌ಗೆ ಸ್ವಲ್ಪ ಹೊಡೆತ ಬೀಳುತ್ತಿತ್ತು.ಜೆಡಿಎಸ್- ಬಿಜೆಪಿ ಮೈತ್ರಿ ಅವರ ತೀರ್ಮಾನ. ನಮಗೆ ಸಂಬಂಧವಿಲ್ಲ. ಎಚ್‌.ಡಿ.ದೇವೇಗೌಡರು ತಮ್ಮ ಪುತ್ರ ಎಚ್‌.ಡಿ.ಕುಮಾರಸ್ವಾಮಿ ಒತ್ತಡಕ್ಕೆ ಮಣಿದು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನು ಹೊರಗಿಟ್ಟು ಮೈತ್ರಿ ಮಾಡಿಕೊಂಡಿದ್ದಾರೆ’ ಎಂದು ಟೀಕಿಸಿದರು.

‘ಮುಂದಿನ 15 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮುಂದುವರಿಯಲಿದೆ. ಮೈಸೂರು, ಚನ್ನಪಟ್ಟಣ, ಕೋಲಾರ, ಚಿಕ್ಕಬಳ್ಳಾಪುರ, ಹಾಸನದಿಂದಲೂ ಕರೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ದೊಡ್ಡ ಕಾರ್ಯಕ್ರಮ ಮಾಡಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ’ ಎಂದರು.

Latest Indian news

Popular Stories