ರಾಜ್ಯದಲ್ಲಿ10 ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 487 ಮಂದಿಯಲ್ಲಿ ಡೆಂಗ್ಯೂ ದೃಢವಾಗುವ ಮೂಲಕ ಸೋಂಕಿತರ ಸಂಖ್ಯೆ 10,499ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 4,572 ಶಂಕಿತ ವ್ಯಕ್ತಿಗಳ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. 487 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ. ಇದರಲ್ಲಿ ವರ್ಷದೊಳಗಿನ 3 ಮಕ್ಕಳಲ್ಲಿ, 18 ವರ್ಷದೊಳಗಿನ 189 ಮಂದಿ ಹಾಗೂ 18 ವರ್ಷ ಮೇಲ್ಪಟ್ಟ 295 ಮಂದಿ ಇದ್ದಾರೆ.

ಹೊಸನಗರ ರಸ್ತೆಯ ನಿವಾಸಿ ಆಶಿಕ್‌ ರಸೂಲ್‌ (27) ಶಂಕಿತ ಡೆಂಗ್ಯೂ ಜ್ವರ ದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತ್ತಿದ್ದ ಆಶಿಕ್‌ ರಸೂಲ್‌ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಒಂದೇ ವಾರದಲ್ಲಿ ಶಂಕಿತ ಡೆಂಗ್ಯೂ ಜ್ವರ ಇಬ್ಬರನ್ನು ಬಲಿ ಪಡೆದಿದೆ. ಇತ್ತೀಚೆಗೆ ರಶ್ಮಿ ನಾಯಕ್‌ ಮೃತಪಟ್ಟಿದ್ದರು.

ಮತ್ತಷ್ಟು ಓದು: ರಾಜ್ಯದಲ್ಲಿ10 ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ

Latest Indian news

Popular Stories