ಹುಬ್ಬಳ್ಳಿ: ಮನೆಯಲ್ಲಿಯೇ (Home) ನೇಣು ಬಿಗಿದುಕೊಂಡು ಮಹಿಳೆ (Woman) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ (Hubballi) ಬಿಡ್ನಾಳದ ಹೇಮರೆಡ್ಡಿ ಕಾಲೋನಿಯಲ್ಲಿ ನಡೆದಿದೆ. ಆರತಿ ಶಿರೋಳಕರ ಮೃತ ದುರ್ದೈವಿಯಾಗಿದ್ದು, 36 ವರ್ಷ ಕಳೆದರೂ ಕೂಡಾ ವಿವಾಹ (Marriage) ಆಗಲಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮೃತ ಮಹಿಳೆ ಮದುವೆಯಾಗಿಲ್ಲ ಎಂದು ಮಾನಸಿಕವಾಗಿ ನೊಂದಿದ್ದರಂತೆ. ಅದೇ ಕೊರಗಿನಲ್ಲಿ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಅಸಹಜ ಸಾವು ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆಗೆ ಕಿಮ್ಸ್ಗೆ ರವಾನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.