Hubballi

ಹುಬ್ಬಳ್ಳಿಯಲ್ಲಿ ಕಾಲೇಜು ಕ್ವಾರ್ಟರ್ಸ್ ನಲ್ಲಿ, ನೇಣು ಬಿಗಿದುಕೊಂಡು ಪ್ರಾಧ್ಯಾಪಕ ಆತ್ಮಹತ್ಯೆ!

ಹುಬ್ಬಳ್ಳಿ : ಹುಬ್ಬಳ್ಳಿಯ ಕಾಲೇಜು ಕ್ವಾರ್ಟರ್ಸ್ ಒಂದರಲ್ಲಿ ಪ್ರಾಧ್ಯಾಪಕರು ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

ನಿನ್ನೆ ರಾತ್ರಿ ಪ್ರಾಧ್ಯಾಪಕ ಪ್ರವೀಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತ ಪ್ರವೀಣ್ ಕುಮಾರ್ ಅವರು ಮೂಲತಃ ದಾವಣಗೆರೆ ಜಿಲ್ಲೆಯವರು ಎಂದು ತಿಳಿದುಬಂದಿದೆ.

ಪ್ರವೀಣ್ ಕುಮಾರ್ ಕಾಲೇಜಿನ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಲ್ಕು ವರ್ಷದಿಂದ ಕೆಮೆಸ್ಟ್ರಿ ಪ್ರಾಧ್ಯಾಪಕರಾಗಿ ಪ್ರವೀಣ್ ಕುಮಾರ್ ಕೆಲಸ ಮಾಡುತ್ತಿದ್ದರು. ಕಳೆದ 10 ದಿನಗಳ ಹಿಂದೆ ಅಷ್ಟೇ ಪ್ರವೀಣ್ ಕುಮಾರ್ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಹುಬ್ಬಳ್ಳಿಯ ವಿದ್ಯಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button